ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚು ಟಿಬಿ ರೋಗಿಗಳೇ ಇರುವ ರಾಜ್ಯ ಯಾವುದು ಗೊತ್ತಾ!? ಇಲ್ಲಿದೆ ಉತ್ತರ!
ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ.
ಇನ್ನೂ ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಧಪಟ್ಟಂತೆ ಲೋಕಾಯುಕ್ತ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.
ಆರು ಮಹಿಳೆಯರ ಸಾವಿನ ಬಗ್ಗೆ ತನಿಖೆಗೆ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಬಿ.ಎಸ್ ಪಾಟೀಲ್ ಆದೇಶಿಸಿದ್ದಾರೆ.
ಇನ್ನು ಬಾಣಂತಿಯರ ಸಾವಿನ ಸಂಬಂಧ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲು ಕೂಡ ಆದೇಶಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರು, ಬಳ್ಳಾರಿ ಸರ್ಕಾರಿ ಆಸ್ಪತ್ರೆ ಹಿರಿಯ ಅಧಿಕಾರಿಗಳು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.
ಇದೇ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿಕೆ ರಾಮಮೂರ್ತಿ ಮತ್ತು ಎಂಎಲ್ಸಿ ರವಿಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ನಿನ್ನೆ ಭೇಟಿ ನೀಡಿ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.
ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡವಾಗಿ 25 ಅಧಿಕಾರಿಗಳು ಹೆರಿಗೆ ವಾರ್ಡ್, ಐಸಿಯು, ಔಷಧ ದಾಸ್ತಾನು ಹಾಗೂ ಬಿಮ್ಸ್ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್ನಲ್ಲಿ ಪರಿಶೀಲಿಸಿದ್ದಾರೆ.