ಬೆಂಗಳೂರು/ಬೆಳಗಾವಿ:- ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಧಪಟ್ಟಂತೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿಂಗೆ ಇದು ಬೇಕಿತ್ತಾ! ಮದುವೆ ಆದ್ರೂ ಪ್ರೇಯಸಿಯರಿಗೋಸ್ಕರ ಕಳ್ಳತನ, ಜೈಲು ಪಾಲಾದ ಭೂಪ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿಯೇ ನವಜಾತ ಶಿಶುಗಳು, ಬಾಣಂತಿಯರು ದಾರುಣವಾಗಿ ಉಸಿರು ಚೆಲ್ಲಿದ್ದಾರೆ. ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಆರೇ ತಿಂಗಳಲ್ಲಿ 322 ಶಿಶುಗಳು ಹಾಗೂ 29 ಬಾಣಂತಿಯರು ಮೃತಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆಯೊಂದರಲ್ಲೇ 172 ಶಿಶುಗಳು ಮಾರಣಹೋಮವಾಗಿದೆ. ಪ್ರತಿ ತಿಂಗಳು ಸರಾಸರಿ 20ರಿಂದ 25 ಮಕ್ಕಳು ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿವೆ. ಅಪೌಷ್ಠಿಕತೆಯಿಂದ ಸಾವುಗಳಾಗಿದೆ ಎಂದಿದ್ದಾರೆ. ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವಿನ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಆರು ತಿಂಗಳಲ್ಲಿ 322 ಮಕ್ಕಳು ಮೃತಪಟ್ಟಿರುವುದು ದೊಡ್ಡ ದುರಂತ. ಪೌಷ್ಠಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಬಳ್ಳಾರಿ ಮಾದರಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.