ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.90 ರೂ. ಇದೆ.
ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸೆಕ್ಸ್ ಬಯಕೆ ಹೆಚ್ಚಾಗಲು ಕಾರಣವೇನು ಗೊತ್ತಾ..?
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.49 ರೂ. ಇದೆ.
ನೋಯ್ಡಾ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ., ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ., ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ., ಹೈದರಾಬಾದ್ ಪೆಟ್ರೋಲ್ 107.41 ರೂ., ಡೀಸೆಲ್ 95.65 ರೂ., ಜೈಪುರ ಪೆಟ್ರೋಲ್ 104.88 ರೂ., ಡೀಸೆಲ್ 90.36 ರೂ., ತಿರುವನಂತಪುರಂ ಪೆಟ್ರೋಲ್ 107.62 ರೂ., ಡೀಸೆಲ್ 96.43 ರೂ., ಭುವನೇಶ್ವರ ಪೆಟ್ರೋಲ್ 101.06 ರೂ., ಡೀಸೆಲ್ 92.91 ರೂ. ಇದೆ.
ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಈ ಕಾರಣಕ್ಕಾಗಿಯೇ ಪ್ರತಿ ರಾಜ್ಯದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.