ಹುಬ್ಬಳ್ಳಿ: ಒಂದು ಕಡೆಯಲ್ಲಿ ಹುಬ್ಬಳ್ಳಿ ಧಾರವಾಡ ಪ್ರತ್ಯೇಕ ಪಾಲಿಕೆಯ ಕೂಗು ಈಗ ಮತ್ತೊಂದು ಕಡೆಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪಾಲಿಕೆಯ ಬಿಜೆಪಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ. ಸ್ಥಳೀಯ ಸಂಸ್ಥೆಗಳ ಆಧಿಕಾರವನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿ ಪಾಲಿಕೆಯ ಬಿಜೆಪಿ ಸದಸ್ಯರು ಇಲ್ಲಿನ ಮಿನಿವಿಧಾನಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂತೋಷ್ ಚವ್ವಾಣ್, ರೂಪಾ ಶೆಟ್ಟಿ, ಉಮಾಮುಕುಂದ, ರಾಧಬಾಯಿ ಸಪಾರೆ, ಶಿವು ಮೆಣಸಿನಕಾಯಿ, ವೀಣಾ ಬರದ್ವಾಡ, ಈಶ್ವರಗೌಡ ಪಾಟೀಲ, ಮಹೇಂದ್ರ ಕೌತಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.