ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ವಿಧಾನ ಪರಿಷತ್ ಶಾಸಕರಾದ ಟಿ.ಎ ಶರವಣ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಟಿ.ಎ ಶರವಣ,
ರಾಜ್ಯದ ಧೀಮಂತ ನಾಯಕ,ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ ಮಾನ್ಯ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ,ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
SM ಕೃಷ್ಣ ನಿಧನಕ್ಕೂ ಮುನ್ನ ಬರೆದ ಕೊನೆಯ ಪತ್ರದಲ್ಲೇನಿದೆ!? ನಿಜಕ್ಕೂ ಮನಮಿಡಿಯುವ ಸಾಲುಗಳು!
ಇನ್ನೂ ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.