ಬೆಂಗಳೂರು: ಎಸ್ಎಂ ಕೃಷ್ಣ ಬದುಕಿನ ಪಯಣವನ್ನು ಮುಗಿಸಿದ್ದಾರೆ. 92 ವರ್ಷದ ಎಸ್ಎಂ ಕೃಷ್ಣ ಅವರು, ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ಅವರ ನಿವಾಸದ ಬಳಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ನೋಡಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಣ್ಣೀರಿಟ್ಟಿದ್ದಾರೆ. ನಂತರ ಮಾತನಾಡಿದ ಡಿ.ಕೆ. ಶಿವಕುಮಾರ್,ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್.ಎಂ. ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ, ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರವೊಂದು ಕಳಚಿ ಬಿದ್ದಂತಾಗಿದೆ ಎಂದರು.
Mutual Fund: ಈ ಮ್ಯೂಚುವಲ್ ಫಂಡ್ʼನಲ್ಲಿ ದಿನಕ್ಕೆ ಜಸ್ಟ್ 50 ರೂಪಾಯಿ ಹೂಡಿಕೆ ಮಾಡಿ 30 ಲಕ್ಷ ಗಳಿಸಿ.!
ಸ್.ಎಂ.ಕೃಷ್ಣ ಅವರು ಓರ್ವ ಸಜ್ಜನ, ಸುಶಿಕ್ಷಿತ ರಾಜಕಾರಣಿ, ಅಜಾತಶತ್ರು, ದೂರದೃಷ್ಟಿಯ ನಾಯಕ. ರಾಜಕೀಯದ ಒಂದೊಂದೇ ಮೆಟ್ಟಿಲುಗಳನ್ನು ಸಾವಧಾನವಾಗಿ ಏರಿದವರು. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿನೋಡುವಂತೆ ಮಾರ್ಪಡಿಸಿದವರು ಎಸ್.ಎಂ.ಕೃಷ್ಣ. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ಡ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಹೇಳಿದ್ದಾರೆ.