ಬಂಗಾರಪೇಟೆ – ಬೈಕ್ ಅಪಘಾತದಲ್ಲಿ ಮೃತಪಟ್ಟ ವೈದ್ಯಾಧಿಕಾರಿ ಡಾ.ಸಂಧ್ಯಾ (೨೫) ಅಂಗಾಂಗಗಳನ್ನು ಹಾಗೂ ದೇಹವನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆಯಲು SM ಕೃಷ್ಣ ಪಾತ್ರ ದೊಡ್ಡದು: CM ಸಿದ್ದರಾಮಯ್ಯ!
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ೧೧ ತಿಂಗಳುಗಳಿಂದ ಡಾ.ಸಂಧ್ಯಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾ ಅವಧಿಯಲ್ಲಿ ರೋಗಿಗಳನ್ನು ಪ್ರೀತಿಯಿಂದ ಮಾತನಾಡಿಸುತ್ತಾ ಉತ್ತಮ ಚಿಕಿತ್ಸೆ ನೀಡುತ್ತಿದ್ದ ಕಾರಣ ಎಲ್ಲರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಬೆಂಗಳೂರು ಮೂಲದವರಾದ ಡಾ.ಸಂಧ್ಯಾ ಮತ್ತು ಪೋಷಕರು ಕೆಜಿಎಫ್ನಲ್ಲಿ ನೆಲಿಸಿದ್ದು,
ನಿತ್ಯ ಕೆಜಿಎಫ್ನಿಂದ ಬೂದಿಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದರು. ಡಿ ೬ ಮನೆಯಿಂದ ಆಸ್ಪತ್ರೆಗೆ ತಂದೆಯ ಜೊತೆ ಬೈಕ್ನಲ್ಲಿ ಬರುವ ವೇಳೆ ಡಾ.ಸಂಧ್ಯ ಮಾರ್ಗ ಮಧ್ಯೆ ಗಾಜಗ ಗೇಟ್ ಬಳಿ ಬೈಕ್ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೆಳೆಗೆ ಬಿದ್ದು ತಲೆಗೆ ತೀವ್ರವಾದ ಗಾಯವಾಗಿದ್ದ ಕಾರಣ ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ನಂತರ ಮಗಳ ಆಸೆಯಂತೆ ಮಣಿಪಾಲ ಆಸ್ಪತ್ರೆಯಲ್ಲಿ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ವೈಧ್ಯಕೀಯ ವಿಧ್ಯಾರ್ಥಿಗಳ ವೈಧ್ಯಕೀಯ ಸಂಶೋಧನೆ ಮತ್ತು ಶಿಕ್ಕಣದ ಉದ್ದೇಶಕ್ಕಾಗಿ ಮೃತ ದೇಹವನ್ನು ಪೋಷಕರು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾನ ಮಾಡಲಿದ್ದಾರೆ.