ಮಂಡ್ಸ: ಸರಳ, ಸಜ್ಜನಿಕೆಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅಂತ್ಯಕ್ರಿಯೆಗೂ ಮುನ್ನ ಸರ್ಕಾರದಿಂದ ಗೌರವ ನಮನ ಸಲ್ಲಿಸಲಾಯಿತು. ಸಿಎಂ, ಡಿಸಿಎಂ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು.
ಸಿಎಂ ಸಿದ್ದರಾಮಯ್ಯ ಎಸ್ ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಡಿಸಿಎಂ ಡಿಕೆಶಿವಕುಮಾರ್ ತಮ್ಮ ಗುರುಗಳಿಗೆ ಕಣ್ಣೀರಿನ ಬೀಳ್ಕೊಡುಗೆ ನೀಡಿದರು. ಗೌರವ ನಮನ ವೇಳೆ ಎಸ್ ಎಂಕೆ ಪಾರ್ಥಿವ ಶರೀರಕ್ಕೆ ನಮಿಸಿ ಕಣ್ಣೀರು. ಇದಕ್ಕೂ ಮುನ್ನ ಪಾರ್ಥೀವ ಶರೀರ ಹೊರಲು ಡಿಸಿಎಂ ಡಿಕೆಶಿ ಮತ್ತು ಡಿಕೆ ಸುರೇಶ್ ಹೆಗಲು ನೀಡಿದರು.
ಗೃಹ ಸಚಿವ ಪರಮೇಶ್ವರ್, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಅಶ್ಚಥ್ ನಾರಾಯಣ, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಮಾಜಿ ಸಚಿವ ಪುಟ್ಟರಾಜು, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಶಾಸಕ ದರ್ಶನ್ ಪುಟ್ಣಯ್ಯ, ಅಭಿಷೇಕ್ ಅಂಬರೀಶ್ ಸಹ ಎಸ್ ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು.