ಬೆಂಗಳೂರು:- ಇನ್ಮೇಲೇನಿದ್ರೂ ಶಾಂತಿ ಬಿಟ್ಟು ಕ್ರಾಂತಿ ಹೋರಾಟ ಅಷ್ಟೇ ಎಂದು ಜಯಮೃತ್ಯುಂಜಯ ಶ್ರೀ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ. ಜತೆಗೆ, ನಿಮ್ಮ ಊರಲ್ಲಿ ರಸ್ತೆ ತಡದು ಹೋರಾಟ ಮಾಡಿ ಎಂದು ಎಲ್ಲಾ ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದಾರೆ.
ಇನ್ನೂ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆದು ಧರಣಿ ನಡೆಸಲು ಜಯಮೃತ್ಯುಂಜಯ ಶ್ರೀ ಕರೆ ನೀಡಿದ್ದಾರೆ. ನಿಮ್ಮ ನಿಮ್ಮ ಊರಲ್ಲಿ ರಸ್ತೆ ತಡೆದು ಹೋರಾಟ ಮಾಡಿ ಎಂದು ಅವರು ಹೇಳಿದ್ದಾರೆ. ಇಂದು ಹಿರೇಬಾಗೇವಾಡಿ ಟೋಲ್ ನಾಕಾ ಬಂದ್ ಮಾಡುತ್ತೇವೆ. ಯಾವುದೇ ಕಾರಣಕ್ಕೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.