ಬೆಳಗಾವಿ:- ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪಂಚಮಸಾಲಿ ಶ್ರೀ ಹೇಳಿದ್ದಾರೆ.
ಕಡಿಮೆ ಬಜೆಟ್ʼನಲ್ಲಿ ರಸಗೊಬ್ಬರದ ವ್ಯಾಪಾರ ಮಾಡಿ 15 ಲಕ್ಷದವರೆಗೂ ಲಾಭ ಪಡೆಯಿರಿ.!
ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.
ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.