ಹಾಸನ: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಬಳಿಯ ಕಟ್ಟೆಗದ್ದೆ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತ ದಂಪತಿ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಟೇಶ್ (55) ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡಿರೋ ರೈತ ದಂಪತಿಯಾಗಿದ್ದು, ಲಕ್ಷಾಂತರ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದರು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಅದಲ್ಲದೆ ಬೆಳೆದಿದ್ದ ಬೆಳೆಯೂ ಆದಾಯ ತಂದುಕೊಂಡದೆ ದಂಪತಿ ಕಂಗಾಲಾಗಿದ್ದರು. ನಿನ್ನೆ ತಡರಾತ್ರಿ ಬಾವಿಗೆ ಹಾರಿ ಪತ್ನಿ ಚಿನ್ನಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಪತಿಯೂ ಅದೇ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.