ಗದಗ: ಪಂಚಮಸಾಲಿ ಸಮುದಾಯದವರಿಗೆ 2 A ಮೀಸಲಾತಿ ನೀಡುವ ವಿಚಾರಕ್ಕೆ ಸುವರ್ಣ ಸೌಧದ ಬಳಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ವಿರೋಧಿಸಿ ರಾಜ್ಯಾದ್ಯಂತ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಗದಗ ನಗರದ ಫೀಲ್ಟ್ ಮಾರ್ಶಲ್ ಕೆ ಎಂ ಕಾರ್ಯಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಮಾನವ ಸರಪಳಿ ನಿರ್ಮಿಸಿ, ರಸ್ತೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಪಂಚಮಸಾಲಿ 2ಎ ಮೀಸಲಾತಿ ನೀಡದಿದ್ರೆ ಉಗ್ರವಾದ ಹೋರಾಟ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ, ಕಾನೂನು ಸಚಿವ ಎಚ್.ಕೆ ಪಾಟೀಲ ವಿರುದ್ಧ ಘೋಷಣೆ ಕೂಗಿದ್ದಾರೆ.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಇನ್ನೂ ಈ ಪ್ರತಿಭಟನೆ ವೇಳೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಈ ವೇಳೆ ಟೈರ್ ಗೆ ಹೊತ್ತಿದ್ದ ಬೆಂಕಿ ಆರಿಸಲು ಪೊಲೀಸರು ಮುಂದಾಗುತ್ತಿದ್ದಂತೆ ಪಂಚಮಸಾಲಿ ಮುಖಂಡರು ಅಡ್ಡಿಪಡಿಸಿದ್ದಾರೆ. ಪೊಲೀಸರ ಜೊತೆಗೆ ವಾಗ್ವಾದ, ತಳ್ಳಾಟ ನಡೆದಿದ್ದು, ಬೆಂಕಿ ನಂದಿಸಲು ಪ್ರತಿಭಟನೆಕಾರರು ಬಿಡದ ಕಾರಣ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಬೆಂಕಿ ಆರಿಸುವ ವೇಳೆ ಇಬ್ಬರು ಪ್ರತಿಭಟನಾಕಾರರಿಗೆ ಬೆಂಕಿ ತಗುಲಿ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ.