ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಅವರು, ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರ ಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಸರಕಾರ ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರಕಾರ ವಹಿಸಬೇಕು.
ಜನಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗುಣಮಟ್ಟದ ಔಷಧಿ ಸರಬರಾಜು ಮಾಡಬೇಕು. ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಸ್ತ್ರ ಚಿಕಿತ್ಸಾ ಕೇಂದ್ರಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.