ಬೆಳಗಾವಿ: ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನೆ ಅವರ ಹಕ್ಕು. 5 ಸಾವಿರ ಟ್ರ್ಯಾಕ್ಟರ್ಗಳನ್ನು ತೆಗೆದುಕೊಂಡು ಮುತ್ತಿಗೆ ಹಾಕಲು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಅದಕ್ಕೆ ಅನುಮತಿ ನೀಡಲಾಗಿತ್ತು, ಮೂವರು ಸಚಿವರನ್ನು ಪ್ರತಿಭಟನಾ ಸ್ಥಳಕ್ಕೆ ಕಳಿಸಲಾಗಿತ್ತು.
ಸಿಎಂ ಜೊತೆ ಮಾತುಕತೆಗೆ ಸ್ವಾಮೀಜಿ ಬರಲಿಲ್ಲ. ಮುಖ್ಯರಸ್ತೆಗೆ ಪ್ರತಿಭಟನಾಕಾರರು ಬಂದರು. ಕಾನೂನು ಉಲ್ಲಂಘನೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋದಾಗ ಲಘು ಲಾಠಿ ಪ್ರಹಾರ ನಡೆದಿದೆ. ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಲಾಠಿ ಚಾರ್ಜ್ ಮಾಡುವುದು ಅನಿವಾರ್ಯ ಆಗಿತ್ತು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ತಿಳಿಸಿದರು. ಇನ್ನೂ ಗೋಲಿಬಾರ್ ಮಾಡುವ ಪ್ಲ್ಯಾನ್ ಇತ್ತು ಎಂಬ ಸ್ವಾಮೀಜಿ ಹೇಳಿಕೆ ಆ ರೀತಿ ಏನೂ ಇಲ್ಲ, ಎಂದರಲ್ಲದೇ ಪೊಲೀಸರು ಯಾರ ಮೇಲೂ ದುರುದ್ದೇಶಪೂರಿತವಾಗಿ ಲಾಠಿ ಪ್ರಹಾರ ನಡೆಸಿಲ್ಲ ಎಂದು ಹೇಳಿದ್ದಾರೆ.