ನವದೆಹಲಿ: ಲೋಕಸಭೆಗೆ ಹಾಗೂ ಎಲ್ಲಾ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಪ್ರಮುಖ ಉದ್ದೇಶವಾಗಿದೆ. ಇನ್ನೂ ಮಹತ್ವದ ಮಸೂದೆಯನ್ನು ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ. ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.
ದಿನಾ ಒಂದು ಗ್ಲಾಸ್ ಈ ನೀರನ್ನು ಕುಡಿಯಿರಿ ಸಾಕು: ಬಲೂನ್ ತರ ಇರೋ ಹೊಟ್ಟೆ ಬೇಗ ಕರಗುತ್ತೆ!
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.