ತುಮಕೂರು:– ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್ ಮಾಡಿದ್ದಾರೆ.
18ನೇ ವಯಸ್ಸಿಗೆ ವಿಶ್ವ ಚೆಸ್ ಚಾಂಪಿಯನ್: ಗುಕೇಶ್ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ!
ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬಂಂಧಿಸಿದ್ದಾರೆ.
ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದರು. ಈ ವಿಡಿಯೋ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.