ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನ ಟಾರ್ಗೆಟ್ ಮಾಡಿ ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಸಂಜಿತ್, ಸೂರ್ಯ ಬಂಧಿತ ಆರೋಪಿಗಳು, ಬೀಗ ಹಾಕಿದ್ದ ಮನೆಗಳನ್ನ ಟಾರ್ಗೆಟ್ ಮಾಡಿ, ರಾತ್ರಿ ವೇಳೆಗೆ ಮನೆಗೆ ಎಂಟ್ರಿ ಕೊಟ್ಟು ಆಭರಣ ದೋಚಿ ಎಸ್ಕೇಪ್ ಆಗುತ್ತಿದ್ದರು.
Friday Remedy: ಶುಕ್ರವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ.! ಬಡತನ ಕಾಡುತ್ತೆ
ಆಭರಣಗಳನ್ನ ಅಡವಿಟ್ಟು ಅದರಿಂದ ಬಂದ ಹಣದಿಂದ ಟ್ರಿಪ್ ಹೋಗಿ ಎಂಜಾಯ್ ಮಾಡುತ್ತಿದ್ದರು. ಇನ್ನೂ ಸಿಸಿಟಿವಿಯನ್ನ ಆಧರಿಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ಚಿನ್ನಾಭರಣ, 4 ಕೆಜಿ 800 ಗ್ರಾಂ ಬೆಳ್ಳಿ ಆಭರಣ ವಶಕ್ಕೆ ಪಡೆದು, ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.