ನವದೆಹಲಿ: ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿಯಲ್ಲಿದ್ದ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಸೀಲ್ದಾ ನ್ಯಾಯಾಲಯವು ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜಿತ್ ಮೊಂಡಲ್ಗೆ ಜಾಮೀನು ಮಂಜೂರು ಮಾಡಿದೆ.
ಕೋಲ್ಕತ್ತಾ ಹೈಕೋರ್ಟ್ನಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿಲಾಗಿತ್ತು. ಸಿಬಿಐ 90 ದಿನಗಳ ಅವಧಿಯಲ್ಲಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿದೆ. ಇದು ಆರೋಪಗಳಿಗೆ ಜಾಮೀನು ಸಿಗಲು ಕಾರಣವಾಯಿತು.
ಅಬ್ಬಬ್ಬಾ.. ಲವಂಗ ಕೃಷಿ ಮಾಡಿ ಗಳಿಸಬಹುದು 1.80 ಲಕ್ಷ ಲಾಭ..! ಈ ಗಿಡ ಹಿತ್ತಲಿನಲ್ಲಿ ಬೆಳೆದ್ರೂ ಸರಿ
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ವೈದ್ಯೆಯ ತಾಯಿ, ಸಿಬಿಐ ತನಿಖೆಯನ್ನು ಚುರುಕುಗೊಳಿಸುತ್ತದೆ ಮತ್ತು ನ್ಯಾಯ ಸಿಗುವಂತೆ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಈಗ, ಆರೋಪಿಗಳಿಗೆ ಜಾಮೀನು ನೀಡಿರುವುದರಿಂದ, ವ್ಯವಸ್ಥೆ ನಮ್ಮನ್ನು ವಿಫಲಗೊಳಿಸುತ್ತಿದೆ ಎಂದು ಭಾಸವಾಗುತ್ತಿದೆ. ಅಲ್ಲದೇ ಪ್ರತಿದಿನ ಪ್ರಭಾವಶಾಲಿಗಳು ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವ ಮತ್ತೊಂದು ಪ್ರಕರಣ ಇದಾಗಲಿದೆಯೇ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಬಂಧಿತ ಪೊಲೀಸ್ ಅಧಿಕಾರಿಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸಂದೀಪ್ ಘೋಷ್ ಸಾಕ್ಷ್ಯವನ್ನು ನಾಶಗೊಳಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಇಬ್ಬರನ್ನೂ ಸಿಬಿಐ ಬಂಧಿಸಿತ್ತು.