ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಪ್ರಸ್ತುತ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
97 ವರ್ಷ ವಯಸ್ಸಿನ ಎಲ್ಕೆ ಅಡ್ವಾಣಿ ಅವರು ಕಳೆದ ಕೆಲ ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ ಕಾರಣ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ಬಬ್ಬಾ.. ಲವಂಗ ಕೃಷಿ ಮಾಡಿ ಗಳಿಸಬಹುದು 1.80 ಲಕ್ಷ ಲಾಭ..! ಈ ಗಿಡ ಹಿತ್ತಲಿನಲ್ಲಿ ಬೆಳೆದ್ರೂ ಸರಿ
ಲಾಲ್ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ. ಸದ್ಯ ಎಲ್ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.