ಬೆಂಗಳೂರು:- ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ-ಸೊಸೆಗೆ ಕಾರ್ಯಕ್ಕೆ ಡಿಕೆ ಶಿವಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Hubballi: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.
ಇನ್ನೂ ಅತ್ತೆ ಮಾಬುಬೀ, ಸೊಸೆ ರೋಷನ್ ಬೇಗಂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ಕೂಡಿಟ್ಟಿದ್ದಾರೆ. ಹೀಗೆ ಕೂಡಿಟ್ಟ 44 ಸಾವಿರ ರೂ. ಅನ್ನು ಬೋರ್ವೆಲ್ ಕೊರಿಸಲು ನೀಡಿದ್ದಾರೆ. ಬೋರ್ವೆಲ್ ಕೊರಿಸಲು 60 ಸಾವಿರ ರೂ. ಖರ್ಚು ಆಗಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ 44 ಸಾವಿರ ರೂ. ಬಳಿಕೆ ಮಾಡಿದ್ದಾರೆ. ಇನ್ನುಳಿದ್ದ ಹಣ ಮಗ ಹಾಕಿ ಬೋರ್ವೆಲ್ ಕೊರಿಸಿದ್ದಾರೆ