ಬಿಗ್ ಬಾಸ್ ಸೀಸನ್ 11ರಲ್ಲಿ ಇವತ್ತು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯಾರು ನಿರೀಕ್ಷೆ ಮಾಡಿರದ ಘಟನೆಯೊಂದು ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ಕ್ಯಾಪ್ಟನ್ ಆಗಿ ಮನೆಯಲ್ಲಿ ಖುಷಿಯಾಗಿದ್ದ ಗೋಲ್ಡ್ ಸುರೇಶ್ ಅವರು ದಿಢೀರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ.
ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋ ಸಸ್ಪೆನ್ಸ್ ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಅಚ್ಚರಿಯ ಘಟನೆ ನಡೆದಿದೆ. ಈ ವಾರ ಸೇಫ್ ಆಗಿ ಒಳ್ಳೆ ಫಾರ್ಮ್ಗೆ ಮರಳಿದ್ದ ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬರುವ ಪರಿಸ್ಥಿತಿ ಎದುರಾಗಿದ್ದು ಮನೆಯಿಂದ ಹೊರ ಬರಲು ಕಾರಣ ಕೇಳಿ ಗೋಲ್ಡ್ ಸುರೇಶ್ ಕಣ್ಣೀರು ಹಾಕಿದ್ದಾರೆ.
ಮನೆಯ ಸದಸ್ಯರಿಗೆ ಬಿಗ್ ಬಾಸ್ ಮಹತ್ವದ ಅನೌನ್ಸ್ಮೆಂಟ್ ಮಾಡಿದ್ದಾರೆ. ಮನೆ ಸದಸ್ಯರೊಬ್ಬರ ನಿಕಟ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಅದು ಗೋಲ್ಡ್ ಸುರೇಶ್ ಅವರ ಮನೆಯಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಘೋಷಣೆ ಮಾಡಲಾಗಿದೆ.
ಮನೆಯಲ್ಲಿ ತುರ್ತು ಸ್ಥಿತಿ ಎದುರಾಗಿದೆ ಅನ್ನೋ ಸುದ್ದಿ ಕೇಳುವುದು ನಿಜಕ್ಕೂ ಆಘಾತಕಾರಿಯಾದದ್ದು. ಬಿಗ್ ಬಾಸ್ ಮನೆಯಲ್ಲಿರುವ ಎಲ್ಲರೂ ಈ ಸುದ್ದಿ ಕೇಳಿ ಕಣ್ಣೀರು ಹಾಕಿದ್ದಾರೆ. ಗೋಲ್ಡ್ ಸುರೇಶ್ ಅವರು ಕಂಗಾಲಾಗಿದ್ದು, ಮನೆಯ ಸದಸ್ಯರು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ದೇವರು ಒಳ್ಳೆಯದು ಮಾಡುತ್ತೆ ಹೋಗಿ ಬನ್ನಿ ಎಂದು ಹೇಳಿ ಭಾವುಕರಾಗಿದ್ದಾರೆ.