ತುಮಕೂರು: ಸ್ಪೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ರಿಯಾಲಿಟಿ ಶೋ ರನ್ನರ್ ಅಪ್ ಆಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೃಷಿ ಹೊಂಡ ಒಂದರದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದನು. ಈ ಸಂಬಂಧ ಕೇಸ್ ದಾಖಲಾಗಿತ್ತು. ಆನಂತ್ರ ಆತನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಇಂದು ಕೋರ್ಟ್ ಗೆ ಡ್ರೋನ್ ಪ್ರತಾಪ್ ರನ್ನು ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಡಿಸೆಂಬರ್ 26 ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
Monday Tips: ಸೋಮವಾರ ಈ ಕೆಲಸ ಮಾಡಿದರೆ ಸಾಕು ಲಕ್ಷ್ಮೀ ಭಾಗ್ಯ ನಿಮ್ಮ ಮನೆಯಲ್ಲಿರುತ್ತೆ..!
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಡ್ರೋನ್ ಪ್ರತಾಪ್ ಕಳೆದ ಕೆಲವು ದಿನಗಳ ಹಿಂದೆ ಅನುಮತಿ ಪಡೆಯದೆ ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಿಸಿದ್ದ ಘಟನೆ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವಾಗಿ ಮದುಗಿರಿ ತಾಲೂಕು ಮಿಡಿಶೇಸಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದರು.
ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಅರೆಸ್ಟ್ ಮಾಡಿ ವಿಚಾರಣೆ ಒಳಪಡಿಸಿದ್ದರು.ಇದೀಗ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆ ಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರೆದಿದೆ.