ಬೆಳಗಾವಿ: ವಿಧಾನಸಭಾ ಕಲಾಪದಲ್ಲಿ ಸದನ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್ ಖಾದರ್ ಅವರು ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ನೀಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಅಶೋಕ್ ಅವರು ವಕ್ಫ್ ವಿಚಾರವನ್ನು ಪ್ರಸ್ತಾಪ ಮಾಡಿದರು. ವಕ್ಫ್ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ವಿಧಾನಮಂಡಲ ಅಧಿವೇಶನದಲ್ಲೇ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ ಅವರು ವರದಿ ಕೊಟ್ಟಿದ್ದರು.
Custard Apple for diabetes: ಡಯಾಬಿಟೀಸ್ ಇರುವವರು ಸೀತಾಫಲ ತಿನ್ನಬಹುದೇ.? ವೈದ್ಯರು ಹೇಳೋದೇನು..?
2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.