ಬೆಳಗಾವಿ: ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ.
ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.61ರಷ್ಟು ಸಿಸೇರಿಯನ್ ಹೆರಿಗೆ ಮಾಡಲಾಗುತ್ತಿದೆ. ಸಿಸೇರಿಯನ್ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ.
Custard Apple for diabetes: ಡಯಾಬಿಟೀಸ್ ಇರುವವರು ಸೀತಾಫಲ ತಿನ್ನಬಹುದೇ.? ವೈದ್ಯರು ಹೇಳೋದೇನು..?
ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.