ಮಂಗಳೂರು:- ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಸ್ನಾನಕ್ಕೆ ಇಳಿದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಜರುಗಿದೆ.
ಅಲೆಮಾರಿ ದಂಪತಿಯ 1 ವರ್ಷದ ಗಂಡು ಮಗು ನಾಪತ್ತೆ: ದೂರು ಕೊಟ್ಟರೂ ಖಾಕಿ ನಿರ್ಲಕ್ಷ್ಯ!
ಮಂಗಳೂರು ಹೊರವಲಯದ ಸೋಮೇಶ್ವರ ಕಡಲ ತೀರದಲ್ಲಿ ಘಟನೆ ಜರುಗಿದೆ. ಉಷಾ ಮೃತ ಮಹಿಳೆ. ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು.
ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಮಹಿಳೆ ಸಮುದ್ರಕ್ಕೆ ಇಳಿದಿದ್ದರು. ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.
ಮಹಿಳೆ ರಕ್ಷಣೆಗೆ ಸ್ಥಳೀಯರು ಮತ್ತು ನಾಡದೋಣಿ ಮೀನುಗಾರರು ಮುಂದಾದರು. ಆದರೆ, ಸಮುದ್ರದಲ್ಲಿ ಮುಳುಗಿ ಮಹಿಳೆ ಮೃತಪಟ್ಟಿದ್ದಾರೆ.