ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಇಂಗ್ಲೆಂಡ್ ವೇಗಿ ಕ್ಲೀನ್ ಬೌಲ್ಡ್ ಮಾಡಿದ್ದಾರೆ.
ಪಾದಾರ್ಪಣೆ ಮಾಡಿದ ಒಂದೇ ವರ್ಷದೊಳಗೆ 50+ ವಿಕೆಟ್ ಪಡೆದ ಇಂಗ್ಲೆಂಡ್ನ ಮೊದಲ ವೇಗಿ ಹಾಗೂ ವಿಶ್ವದ 2ನೇ ಬೌಲರ್ ಎಂಬ ದಾಖಲೆ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ನಿರ್ಮಿಸಿದ್ದಾರೆ.
ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಗಸ್ ಅಟ್ಕಿನ್ಸನ್ ಒಟ್ಟು 4 ವಿಕೆಟ್ ಕಬಳಿಸಿದ್ದಾರೆ. ಈ ನಾಲ್ಕು ವಿಕೆಟ್ಗಳೊಂದಿಗೆ ಗಸ್ ಈ ವರ್ಷ 50 ವಿಕೆಟ್ಗಳನ್ನು ಪೂರೈಸಿದ್ದಾರೆ.
ಆಗಸ್ಟ್ 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಗಸ್ ಅಟ್ಕಿನ್ಸನ್ ಈವರೆಗೆ 11 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1852 ಎಸೆತಗಳನ್ನು ಎಸೆದಿರುವ ಅವರು ಒಟ್ಟು 52 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪಾದಾರ್ಪಣೆ ವರ್ಷದಲ್ಲೇ 50 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.