ಬೆಂಗಳೂರು:- ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತೆರಿಗೆ ವಂಚನೆ: ಬೆಳ್ಳಂಬೆಳಗ್ಗೆ ಬಿಲ್ಡರ್ಸ್ಗಳಿಗೆ ಐಟಿ ಶಾಕ್, 5 ಕಡೆ ದಾಳಿ!
ಬಾಲರಾಜ್(೪೧) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೆಸರಘಟ್ಟ ರಸ್ತೆ ಬಳಿಯ ಸಿಲುವೆಪುರದಲ್ಲಿ ಈ ಘಟನೆ ಜರುಗಿದೆ. ೧೮ ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದ. ಹೆಂಡತಿ ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೀತಿತ್ತು. ಗಲಾಟೆ ಬಳಿಕ ಮನೆ ತೊರೆದು ಬಾಲರಾಜ್ ಪತ್ನಿ ತವರು ಸೇರಿದ್ದರು. ಇತ್ತ ಯಾರು ಇಲ್ಲದ ವೇಳೆ ಮನೆಯ ಫ್ಯಾನ್ಗೆ ನೇಣುಬಿಗಿದು ಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಬಾಲರಾಜ್ ಕ್ರಿಕೆಟ್ ಪಟುವಾಗಿದ್ದ. ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ.
ಅವರ ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನು ಇಟ್ಟು ಶವ ಅಂತಿಮ ಸಂಸ್ಕಾರ ಮಾಡಲಾಗಿದೆ.
ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.