ಬೆಂಗಳೂರು:- ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ.
ಪಪ್ಪಾಯಿ ಒಳ್ಳೆಯದೇ ಆದರೆ ಪದಾರ್ಥಗಳೊಂದಿಗೆ ಮಾತ್ರ ಎಂದಿಗೂ ತಿನ್ನಬೇಡಿ!
ಇನ್ನೂ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, HSRP ಅಳವಡಿಸದ ಮಾಲೀಕರ ಮೇಲೆ ಸದ್ಯಕ್ಕೆ ಯಾವುದೇ ಕ್ರಮ ಇಲ್ಲ ಎಂದು ಹೇಳಲಾಗಿದೆ.
ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದೆ.
ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಕೋರ್ಟ್ ಡಿಸೆಂಬರ್ 31 ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ. ಇನ್ನು ಹೆಚ್ಚಿನ ವಾಹನ ಮಾಲೀಕರು ಹೆಚ್ಎಸ್ಆರ್ಪಿ ಆಳವಡಿಕೆಗೆ ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ತೀರ್ಮಾನ ಮಾಡಿದೆ.
ಒಟ್ಟಿನಲ್ಲಿ ಹೈಕೋರ್ಟ್ ನಿರ್ದೇಶನ ನೀಡುವರೆಗೆ ವಾಹನ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಾರದು ಹೈಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ.