ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜೀವ್ ಗಾಂಧಿ ಮಂಡಲ್ ಕಮಿಷನ್ ವಿರೋಧಿಸಿದ್ದರು. ಓಬಿಸಿಗೆ ಮೀಸಲಾತಿ ನೀಡಲು ವಿರೋಧಿಸಿದರು, ಈಗ ಮೀಸಲಾತಿ ಹೆಚ್ಚಿಸುವುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ. 50% ಮೀಸಲಾತಿ ಹೆಚ್ಚಿಸುವುದಾಗಿ ಕಾಂಗ್ರೆಸ್ ಹೇಳಿದೆ.
ಧರ್ಮದ ಆಧಾರದ ಮೇಲೆ ಎರಡು ರಾಜ್ಯಗಳಲ್ಲಿ ಮೀಸಲಾತಿ ಜಾರಿ ಇದೆ. ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ. ಈಗ 50%ಗಿಂತ ಹೆಚ್ಚು ಮೀಸಲಾತಿ ಹೆಚ್ಚಿಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಆದ್ರೆ ಇದು ಬಿಜೆಪಿ ಇರುವವರೆಗೂ ಇದು ಸಾಧ್ಯವಿಲ್ಲ ಎಂದು ಅಮಿತ್ ಶಾ ಶಪಥ ಮಾಡಿದ್ದಾರೆ.
ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್
ಕಾಂಗ್ರೆಸ್ ಮೀಸಲಾತಿ ವಿರೋಧಿ ಪಕ್ಷ. ಓಬಿಸಿಗಳಿಗೆ ಮೀಸಲಾತಿ ನೀಡಲು ಕಾಕಾ ಸಾಹೇಬ್ ಕಾಲೇಲ್ಕರ್ ಸಮಿತಿ ರಚನೆ ಮಾಡಲಾಯಿತು. ಅದರ ವರದಿ ಎಲ್ಲಿದೆ? ನಾನು ಹುಡುಕಿದೆ ಎಲ್ಲೂ ಇಲ್ಲ. ಈಗ ಲೈಬ್ರರಿಯಲ್ಲಿದೆ ಎನ್ನುತ್ತಿದ್ದಾರೆ. ಓಬಿಸಿಗೆ ಮೀಸಲಾತಿ ನೀಡುವ ಪ್ರಸ್ತಾಪ ಕಾಂಗ್ರೆಸ್ ಲೈಬ್ರರಿಯಲ್ಲಿದೆ. ಈ ವರದಿ ಜಾರಿಯಾಗಿದ್ದರೆ ಮಂಡಲ ಕಮಿಷನ್ ವರದಿ ಜಾರಿ ಮಾಡುವ ಅಗತ್ಯ ಇರಲಿಲ್ಲ ಎಂದರು.