ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಅಭಿನಯದ ಪುಷ್ಪ-2 ಸಿನಿಮಾಕ್ಕೆ ಫ್ಯಾನ್ಸ್ ಫಿದಾ ಆಗಿದ್ದು, ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಥಿಯೇಟರ್ಗಳಲ್ಲಿ ಸಖತ್ ಕಲೆಕ್ಷನ್ ಮಾಡುತ್ತಿರುವ ಪುಷ್ಪ2 ಸಿನಿಮಾ ಕೆಜಿಎಫ್, ಆರ್ಆರ್ಆರ್ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಿದೆ. ಇನ್ನೂ ಪುಷ್ಪ 2 ಪ್ರೀಮಿಯರ್ ಶೋ ಅಭಿಮಾನಿ ಸಾವಿನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನಿನ ಮೇಲೆ ನಟ ಅಲ್ಲು ಅರ್ಜುನ್ ಹೊರಬಂದಿದ್ದಾರೆ ಆದರೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್
ಡಿ.13 ರಂದು ಹೈದರಾಬಾದ್ನಲ್ಲಿ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ತೆಲಂಗಾಣ ಹೈಕೋರ್ಟ್ಗೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.
ತದನಂತರ ತುರ್ತು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 50,000 ವೈಯಕ್ತಿಕ ಬಾಂಡ್ ಆಧಾರದ ಮೇಲೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧ ಇದೀಗ ತೆಲಂಗಾಣ ಪೊಲೀಸ್ ಅಧಿಕಾರಿಗಳು ಅಲ್ಲು ಅರ್ಜುನ್ಗೆ ನೀಡಿರುವ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.