ಮಂಡ್ಯ:- ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ, ಡಿ.20, 21 ಕ್ಕೆ ಮಂಡ್ಯ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಡಿ.20 ರಿಂದ ಡಿ.22ರವರೆಗೆ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಡಿ.20 ಹಾಗೂ 21 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ, ಆದೇಶಿಸಿದ್ದಾರೆ
ಜಿಲ್ಲಾಧಿಕಾರಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಗಣ್ಯರು, ನೋಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಬರಲಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಕನ್ನಡದ ಐಕ್ಯತೆಯ ಸಂಕೇತವಾಗಿರುವ ನಮ್ಮ ಸಾಹಿತ್ಯ-ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪಾನ್ಯಾಸಕರು ಭಾಗವಹಿಸುವ ಮೂಲಕ ಸಾಹಿತ್ಯಾಭಿರುಚಿ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.