ಉತ್ತರ ಕರ್ನಾಟಕದ ಹಲವೆಡೆ ಶೀತ ವಾತವರಣ ಇರಲಿದೆ.
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ: ಡಿಸೆಂಬರ್ 31ರಿಂದ ಸಾರಿಗೆ ಮಷ್ಕರ! ಸಿಬ್ಬಂದಿಗಳಿಗೆ ಕರಪತ್ರ ಹಂಚಿಕೆ!
ಬೀದರ್, ಕಲಬುರಗಿ, ವಿಜಯಪುರದಲ್ಲಿ ತುಂಬಾ ಚಳಿ ಇದೆ. ಡಿಸೆಂಬರ್ 24ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಚಳಿ ಕಡಿಮೆಯಾಗಿದೆ. ಎಚ್ಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.