ಬೆಂಗಳೂರು/ಬೆಳಗಾವಿ:-ಉತ್ತರ ಕರ್ನಾಟಕದ ವಿಚಾರಗಳನ್ನು ಸದನದಲ್ಲಿ ಚರ್ಚಿಸಲು ಸಮಯಾವಕಾಶ ಕೊಡದ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಪ್ರತಿಭಟನೆ ಮಾಡಿದರು. ಹೌದು, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರತಿಭಟನೆ ಮಾಡಿದರು.
EMIನಲ್ಲಿ ಫೋನ್ ಖರೀದಿ ಮಾಡುವುದು ಲಾಭವೋ ಅಥವಾ ನಷ್ಟವೋ.? ಇಲ್ಲಿದೆ ನೋಡಿ ಉತ್ತರ
ಇದನ್ನು ವಿರೋಧ ಮಾಡಿದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಸದನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡದೇ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಗೆ ಧಿಕ್ಕಾರ ಎಂದು ಆಕ್ರೋಶ ಹೊರ ಹಾಕಿದರು. ಅಲ್ಲದೇ ತಮ್ಮ ತೂತು ಮುಚ್ಚಿ ಕೊಳ್ಳಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ರಾಜ್ಯದ ವಿಪಕ್ಷ ನಾಯಕರು ಹರಿಹಾಯ್ದಿದ್ದಾರೆ. ಪ್ರತಿಭಟನೆಯಲ್ಲಿ ಪರಿಷತ್ ಶಾಸಕ ಟಿಎ ಶರವಣ ಸೇರಿ ಸಾಕಷ್ಟು ಜೆಡಿಎಸ್, ಬಿಜೆಪಿ ನಾಯಕರು ಒಟ್ಟಾಗಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.