ಬೆಳಗಾವಿ, ಡಿ.19: ಬಿಜೆಪಿ ಪಕ್ಷದವರಿಗೆ ಕಿಂತಿಷ್ಟೂ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸಿಟಿ ರವಿ ಅರೆಸ್ಟ್: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲಾ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!
ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ.
ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು” ಎಂದು ಕಿಡಿಕಾರಿದರು.
ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, “ಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲ” ಎಂದು ತಿಳಿಸಿದರು.