ಚಿಕ್ಕಮಗಳೂರು:- ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ CT ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ಗೆ ಕರೆ ಕೊಡಲಾಗಿದೆ.
ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ: ಜಿ. ಪರಮೇಶ್ವರ್!
ರಾಜ್ಯ ಮಹಿಳಾ ಸಚಿವೆ ಲಕ್ಷಿ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆಂದು ಆರೋಪಿಸಿ ಬಂಧಿಸಿರುವುದನ್ನು ಖಂಡಿಸಿ ಬಂದ್ಗೆ ಕರೆ ನೀಡಿ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿಯ ಜಿಲ್ಲಾಧ್ಯಕ್ಷ ದೇವರ ಶೆಟ್ಟಿ ನೇತೃತ್ವದಲ್ಲಿ ನಗರ ಬಂದ್ಗೆ ಮನವಿ ಮಾಡುತ್ತಾ ಹನುಮಂತಪ್ಪ ಸರ್ಕಲ್ ಬಳಿ ಬಂದಾಗ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಇಂದು ಚಿಕ್ಕಮಗಳೂರು ನಗರ ಬಂದ್ಗೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್ನಲ್ಲಿ 6 ಕೆಎಸ್ಆರ್ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.