ಪರಂಗಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಪರಂಗಿಹಣ್ಣಿನ ಸಿಪ್ಪೆ ಸುಲಿದ ಬಳಿಕ ಅದರಲ್ಲಿರುವ ಬೀಜಗಳನ್ನು ನಿಷ್ಪ್ರಯೋಜಕವೆಂದು ಪರಿಗಣಿಸಿ ಕಸದ ಬುಟ್ಟಿಗೆ ಎಸೆಯುತ್ತೇವೆ.
Bangalore: ಮಂಚದ ಮೆಲೆ ಪತ್ನಿಯರ ಅದಲುಬದಲು: ಇಲ್ಲೆಯೆ ನಡೆಯುತ್ತಿದೆ ನಿವು ಊಹಿಸದ ಕಥೆ
ಆದರೆ, ಪರಂಗಿ ಹಣ್ಣು ಮಾತ್ರವಲ್ಲ, ಅದರ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಪಪ್ಪಾಯಿ ಬೀಜಗಳು ಹಣ್ಣಿನಂತೆಯೇ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂದು ನಾವು ನಿಮಗೆ ಇಲ್ಲಿ ಹೇಳುತ್ತೇವೆ ನೋಡಿ.ಅವು ಸಾಮಾನ್ಯವಾಗಿ ಕಹಿ ವಾಸನೆಯನ್ನು ಹೊಂದಿರುತ್ತವೆ. ಆದರೆ ಅವುಗಳನ್ನು ಒಣಗಿಸಿದ ನಂತರ ನೀವು ಅವುಗಳನ್ನು ತಿನ್ನಬಹುದು ಅಥವಾ ಅವುಗಳನ್ನು ನಿಮ್ಮ ಸ್ಮೂಥಿಗಳಲ್ಲಿಯೂ ಸಹ ಹಾಕಿಕೊಂಡು ಮಿಕ್ಸ್ ಮಾಡಿಕೊಳ್ಳಬಹುದು.
ಅವು ಸಾಮಾನ್ಯವಾಗಿ ಕಹಿ ವಾಸನೆಯನ್ನು ಹೊಂದಿರುತ್ತವೆ. ಆದರೆ ಅವುಗಳನ್ನು ಒಣಗಿಸಿದ ನಂತರ ನೀವು ಅವುಗಳನ್ನು ತಿನ್ನಬಹುದು ಅಥವಾ ಅವುಗಳನ್ನು ನಿಮ್ಮ ಸ್ಮೂಥಿಗಳಲ್ಲಿಯೂ ಸಹ ಹಾಕಿಕೊಂಡು ಮಿಕ್ಸ್ ಮಾಡಿಕೊಳ್ಳಬಹುದು,.
1. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ: ಪಪ್ಪಾಯಿ ಹಣ್ಣಿನ ಬೀಜಗಳು ಪಾಲಿಫಿನಾಲ್ ಗಳನ್ನು ಹೊಂದಿರುತ್ತವೆ, ಅವು ಬಲವಾದ ಉತ್ಕರ್ಷಣ ನಿರೋಧಕಗಳಾಗಿವೆ. ಅವು ನಿಮ್ಮ ದೇಹವನ್ನು ಹಲವಾರು ರೀತಿಯ ಕ್ಯಾನ್ಸರ್ ನಿಂದ ರಕ್ಷಿಸುತ್ತವೆ.
2. ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ: ಪಪ್ಪಾಯಿ ಹಣ್ಣಿನ ಒಳಗಿರುವ ಬೀಜಗಳು ಕಾರ್ಪೈನ್ ಎಂಬ ವಸ್ತುವನ್ನು ಹೊಂದಿರುತ್ತವೆ, ಅದು ನಿಮ್ಮ ಕರುಳಿನಲ್ಲಿರುವ ಹುಳುಗಳು ಮತ್ತು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ, ಮಲಬದ್ಧತೆಯನ್ನು ತಪ್ಪಿಸುತ್ತದೆ ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಸಿರುತ್ತದೆ ಎಂದು ಹೇಳಲಾಗುತ್ತದೆ.
3. ದೇಹದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ: ಪಪ್ಪಾಯಿ ಹಣ್ಣಿನಲ್ಲಿರುವ ಬೀಜಗಳಲ್ಲಿ ಕಡಿಮೆ ಕ್ಯಾಲೊರಿಗಳು ಮತ್ತು ಹೆಚ್ಚಿನ ಫೈಬರ್ ಇರುತ್ತದೆ. ಇದು ದೇಹದ ತೂಕವನ್ನು ಇಳಿಸಿಕೊಳ್ಳಲು ಉತ್ತಮ ಆಹಾರವಾಗಿದೆ.
4. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪಪ್ಪಾಯಿ ಹಣ್ಣಿನ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಜೀವಸತ್ವಗಳು ಮತ್ತು ಖನಿಜಗಳು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ಸಹ ರಕ್ಷಿಸುತ್ತದೆ.
5. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ: ಇದು ದೇಹದಲ್ಲಿರುವಂತಹ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅವು ಓಲಿಕ್ ಆಮ್ಲ ಮತ್ತು ಇತರ ಮೊನೊಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇದರಿಂದಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆ ಆಗುತ್ತದೆ.
,