ಅಶ್ವಿನ್ ನಿವೃತ್ತಿಗೆ ತಂಡದಲ್ಲಿ ಆಗುತ್ತಿದ್ದ ಅವಮಾನವೂ ಕಾರಣವಾಗಿರಬಹುದು ಎಂದು ಅಶ್ವಿನ್ ಅವರ ತಂದೆ ರವಿಚಂದ್ರನ್ ಅವರು ಹೇಳಿದ್ದಾರೆ. ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಕೊನೆಯ ಗಳಿಗೆಯಲ್ಲಿ ನನ್ನ ಮಗನ ನಿವೃತ್ತಿ ನಿರ್ಧಾರದ ಬಗ್ಗೆ ನನಗೂ ತಿಳಿಯಿತು. ಅವನ ಮನಸ್ಸಿನಲ್ಲಿ ಏನಾಗುತ್ತಿದೆಯೋ ಗೊತ್ತಿಲ್ಲ. ನಾನಂತೂ ಸಂಪೂರ್ಣ ಸಂತೋಷದಿಂದ ಒಪ್ಪಿಕೊಂಡೆ. ಆದರೆ ಅವರು ನಿವೃತ್ತಿ ಘೋಷಿಸಿದ ರೀತಿ, ಒಂದು ಕಡೆ ನನಗೆ ತುಂಬಾ ಸಂತೋಷ ನೀಡಿದ್ದರೆ,
ಮತ್ತೊಂದೆಡೆ ನನಗೆ ನೋವುಂಟು ಮಾಡಿದೆ. ಏಕೆಂದರೆ ಅವನು ತನ್ನ ಆಟವನ್ನು ಮುಂದುವರಿಸಬೇಕಾಗಿತ್ತು. ನಿವೃತ್ತಿ ಎಂಬುದು ಅಶ್ವಿನ್ ಅವರ ನಿರ್ಧಾರವಾಗಿದ್ದು, ನಾನು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಅವನು ನಿವೃತ್ತಿ ತೆಗೆದುಕೊಂಡ ರೀತಿಗೆ ಹಲವು ಕಾರಣಗಳಿರಬಹುದು. ಅದು ಅಶ್ವಿನ್ಗೆ ಮಾತ್ರ ಗೊತ್ತು, ಇದರಲ್ಲಿ ತಂಡದಲ್ಲಿ ಆತನಿಗೆ ಆಗುತ್ತಿದ್ದ ಅವಮಾನವೂ ಕಾರಣವಾಗಿರಬಹುದು.
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ಅಶ್ವಿನ್ ಅವರ ನಿವೃತ್ತಿ ನಮಗೆ ಭಾವನಾತ್ಮಕ ಕ್ಷಣವಾಗಿದೆ ಏಕೆಂದರೆ ಅವರು 14-15 ವರ್ಷಗಳ ಕಾಲ ತಂಡದಲ್ಲಿ ಆಡಿದರು. ಹೀಗಾಗಿ ಅವರ ಹಠಾತ್ ನಿವೃತ್ತಿ ನಮಗೆ ಆಘಾತ ತಂದಿತು. ಆತನನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ನಾವು ಭಾವಿಸುತ್ತೇವೆ. ಹೀಗಾಗಿ ಇದನ್ನೆಲ್ಲಾ ಇನ್ನೆಷ್ಟು ದಿನ ಸಹಿಸಿಕೊಳ್ಳಲು ಸಾಧ್ಯ ಹೇಳಿ? ಹಾಗಾಗಿಯೇ ಅಶ್ವಿನ್ ನಿವೃತ್ತಿ ನಿರ್ಧಾರ ಮಾಡಿರಬಹುದು ಎಂದು ಅಶ್ವಿನ್ ಅವರ ತಂದೆ ಹೇಳಿದ್ದಾರೆ.