ವಾಷಿಂಗ್ಟನ್ : ಅಧಿಕಾರ ತ್ಯಜಿಸುವುದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸುಮಾರು 4.3 ಶತಕೋಟಿ ಡಾಲರ್ ನಷ್ಟು ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡಿರುವುದಾಗಿ ಬೈಡನ್ ಘೋಷಿಸಿದ್ದಾರೆ.
4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.