ಬರ್ಲಿನ್ : ಜರ್ಮನಿಯ ಮ್ಯಾಗ್ಡೆಬರ್ಗ್ ಎಂಬಲ್ಲಿನ ಜನದಟ್ಟಣೆಯ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಹರಿಸಿದ ಪರಿಣಾಮ ಕನಿಷ್ಠ ಓರ್ವ ಮೃತಪಟ್ಟಿದ್ದು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯ ಮೂಲತಃ ಸೌದಿ ಅರೇಬಿಯಾದವನು ಎನ್ನಲಾಗಿದ್ದು, ಜರ್ಮನಿಯ ಕಾಯಂ ನಿವಾಸಿ ಕಾರ್ಡ್ ಪಡೆದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
“ಸದ್ಯಕ್ಕೆ ಆತನೊಬ್ಬನೇ ದಾಳಿಕೋರ ಎಂದು ನಂಬಲಾಗಿದ್ದು, ನಮಗೆ ತಿಳಿದಂತೆ ಸದ್ಯದಲ್ಲಿ ನಗರಕ್ಕೆ ಬೇರೆ ಯಾವುದೇ ಅಪಾಯ ಇಲ್ಲ” ಎಂದು ಸ್ಯಾಕ್ಸೋನಿ-ಅನ್ಹಾಲ್ಟ್ ಗವರ್ನರ್ ರೀನರ್ ಹಸ್ಲೋಫ್ ಸ್ಪಷ್ಟಪಡಿಸಿದ್ದಾರೆ.