ಪಪ್ಪಾಯಿಯು ಅದರ ಪ್ರಬಲ ಗುಣಲಕ್ಷಣಗಳು ಮತ್ತು ಹಲವಾರು ಆರೋಗ್ಯ ಪ್ರಯೋಜನಗಳಿಗಾಗಿ ಬಹುತೇಕ ಪ್ರತಿ ಋತುವಿನಲ್ಲಿ ಆನಂದಿಸುವ ಅತ್ಯಂತ ಪ್ರಿಯವಾದ ಹಣ್ಣುಗಳಲ್ಲಿ ಒಂದಾಗಿದೆ. ಈ ಹಣ್ಣು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ಹಿಡಿದು ದೈನಂದಿನ ಆಹಾರದಲ್ಲಿ ವಿಟಮಿನ್ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಸೇವನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಚಳಿಗಾಲದಲ್ಲಿ ನಿಮ್ಮ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಬೇಕೆಂದರೆ ಪ್ರತಿದಿನ ಪಪ್ಪಾಯಿಯನ್ನು ತಿನ್ನಿ. ಇದು ದೇಹವನ್ನು ಹೈಡ್ರೇಟ್ ಮಾಡುವ ಸೂಪರ್ ಫುಡ್ ಆಗಿದೆ. ಚಳಿಗಾಲದಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ದೇಹವು ನಿರ್ಜಲೀಕರಣಗೊಳ್ಳುತ್ತದೆ ಮತ್ತು ಜೀರ್ಣಕ್ರಿಯೆ ಆರೋಗ್ಯಕರವಾಗಿರುತ್ತದೆ.
ಹೀಗಾಗಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 200 ಗ್ರಾಂ ಪಪ್ಪಾಯಿಯನ್ನು ತಿಂದರೆ ದೇಹಕ್ಕೆ ಸಂಪೂರ್ಣ ಪೌಷ್ಟಿಕಾಂಶ ಸಿಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಹಣ್ಣು ಪೋಷಕಾಂಶಗಳ ಕೊರತೆಯನ್ನು ನೀಗಿಸಿ, ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತದೆ. ಇದಲ್ಲದೇ ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಸಿಗುವ ಇತರ ಆರೋಗ್ಯ ಪ್ರಯೋಜನಗಳು ಯಾವುವು ಎಂದು ತಿಳಿಯೋಣ ಬನ್ನಿ.
ರೋಗನಿರೋಧಕ ಶಕ್ತಿ: ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಶೀತ ಮತ್ತು ಜ್ವರದಂತಹ ಸಮಸ್ಯೆಗಳನ್ನು ತಡೆಗಟ್ಟುತ್ತದೆ. ಪ್ರತಿದಿನ ಈ ಹಣ್ಣನ್ನು ತಿನ್ನುವುದರಿಂದ ಸೋಂಕುಗಳು ದೂರವಿರುತ್ತದೆ. ಜೊತೆಗೆ ಪಪ್ಪಾಯಿ ಆರೋಗ್ಯವನ್ನು ಕಾಪಾಡುತ್ತದೆ. ಸಾಕಷ್ಟು ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ.
ತೂಕ ನಿಯಂತ್ರಣ: ಪಪ್ಪಾಯಿ ತೂಕ ಇಳಿಕೆಗೆ ಸಹಾಯಕವಾಗಿದೆ. ಈ ಹಣ್ಣು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಫೈಬರ್ ಹೊಂದಿದೆ. ಇದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ವ್ಯಾಯಾಮವಿಲ್ಲದೇ, ಅತಿಯಾದ ಆಹಾರ ಸೇವಿಸುವುದರಿಂದ ತೂಕ ಹೆಚ್ಚಾಗುತ್ತದೆ. ಹೀಗಾಗಿ ಇಂತಹ ಸಮಯದಲ್ಲಿ ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ತೂಕ ನಿಯಂತ್ರಣಕ್ಕೆ ಬರುತ್ತದೆ.
ತ್ವಚೆಯ ಆರೋಗ್ಯ: ತ್ವಚೆಯನ್ನು ಆರೋಗ್ಯವಾಗಿಡಲು ಪ್ರತಿದಿನ ಪಪ್ಪಾಯಿ ತಿನ್ನಬೇಕು. ವಿಟಮಿನ್ ಎ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿರುವ ಪಪ್ಪಾಯಿಯು ಚರ್ಮದಲ್ಲಿನ ತೇವಾಂಶವನ್ನು ಕಾಪಾಡುತ್ತದೆ.
ಮಧುಮೇಹಿಗಳಿಗೆ ಪಪ್ಪಾಯಿ: ಪಪ್ಪಾಯಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಹಣ್ಣು. ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಈ ಹಣ್ನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದಿಲ್ಲ. ಮಧುಮೇಹಿಗಳು ಪ್ರತಿದಿನ ಪಪ್ಪಾಯಿ ತಿಂದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟ ಕೂಡ ಸಾಮಾನ್ಯ ಪ್ರಮಾಣದಲ್ಲಿರುತ್ತದೆ.
ಜೀರ್ಣಕ್ರಿಯೆ ಆರೋಗ್ಯ: ಮಲಬದ್ಧತೆ, ಗ್ಯಾಸ್ಟ್ರಿಕ್, ಅಸಿಡಿಟಿಯಂತಹ ಜೀರ್ಣಕಾರಿ ಸಮಸ್ಯೆಗಳು ಚಳಿಗಾಲದಲ್ಲಿ ತುಂಬಾ ಕಿರಿಕಿರಿ ಉಂಟು ಮಾಡುತ್ತದೆ. ಆದರೆ ಪ್ರತಿದಿನ ಪಪ್ಪಾಯಿ ತಿಂದರೆ ಜೀರ್ಣಕ್ರಿಯೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಪಪ್ಪಾಯಿಯಲ್ಲಿರುವ ಪಪೈನ್ ಎಂಬ ಕಿಣ್ವವು ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರತಿನಿತ್ಯ 200 ಗ್ರಾಂ ಪಪ್ಪಾಯಿ ತಿಂದರೆ ಗಂಟೆಗಟ್ಟಲೆ ಟಾಯ್ಲೆಟ್ ನಲ್ಲಿ ಕುಳಿತುಕೊಳ್ಳುವುದು ತಪ್ಪುತ್ತದೆ