ಬೆಂಗಳೂರು: ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗದೆ ಕ್ರಮವಹಿಸಲು ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ಹೊಸ ರೂಲ್ಸ್ ಬಿಡುಗಡೆ ಮಾಡಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.
ವಿಪರೀತ ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ..? ಹಾಗಾದ್ರೆ ಇಲ್ಲಿದೆ ನೋಡಿ ಪರಿಹಾರ!
ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ನಿಯಮಗಳನ್ನು ಜಾರಿ ಮಾಡಲು ತಯಾರಿ ನಡೆದಿದೆ.
ಹೊಸ ವರ್ಷಾಚರಣೆಗೆ ಏನೆಲ್ಲ ನಿಯಮ?
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
- ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ಗಳು ಬಂದ್.
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
- ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
- ಆಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
- ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
- ಬಾರ್, ಪಬ್ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ಗೆ ಸೂಚನೆ.
- ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
- ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.
ನಗರದಲ್ಲಿನ ಕಸ ವಿಲೇವಾರಿ ಮಾಡುವುದು. ಬ್ಯಾರಿಕೇಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಸೂಚಿಸಿದ ಜಾಗದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವುದು. ಇನ್ನು, ಹೊಸ ವರ್ಷಾಚರಣೆಗೆ ಬಂದ ಜನರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೇ, ಆರೋಗ್ಯ ತಪಾಸಣೆಗೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.