ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆರಾಯನ ಅಬ್ಬರ ಜೋರಾಗಿ ಇರಲಿದೆ. ನಾಳೆಯಿಂದ ಮೂರು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಕೊಂಚ ಮಟ್ಟದ ಪರಿಣಾಮ ಬೀರಲಿದ್ದು. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ವಿಪರೀತ ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ..? ಹಾಗಾದ್ರೆ ಇಲ್ಲಿದೆ ನೋಡಿ ಪರಿಹಾರ!
ಕಳೆದ ದಿನಗಳ ಹಿಂದೆಯಷ್ಟೇ ಚಳಿ ಮತ್ತು ಮಳೆ ನಿಂತಿತ್ತು. ಫೆಂಗಲ್ ಚಂಡಮಾರುತದ ಬಿಸಿ ರಾಜ್ಯಕ್ಕೆ ತಟ್ಟಿದ್ದ ಪರಿಣಾಮ ಜೋರು ಮಳೆ ಆಗಿತ್ತು. ಇಡೀ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ ಬಿದ್ದ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿತ್ತು.