ಟೀಮ್ ಇಂಡಿಯಾದ ಮಹಿಳಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಭಾರತ ಮಹಿಳಾ ತಂಡ ಅದೇ ರೀತಿಯಲ್ಲಿ ಏಕದಿನ ಸರಣಿಯನ್ನು ಆರಂಭಿಸಿದೆ.
ಪುರುಷರೇ ನಿಮ್ಮ ಹೊಟ್ಟೆ ಬಲೂನ್ ತರ ಊದಿದ್ಯಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಗ್ಯಾರಂಟಿ ರಿಸಲ್ಟ್!
ನಾಯಕಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 211 ರನ್ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಉಪನಾಯಕಿ ಸ್ಮೃತಿ ಮಂಧಾನ ಅವರ 91 ರನ್ಗಳ ಆಧಾರದ ಮೇಲೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 314 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ತಂಡ ಕೇವಲ 103 ರನ್ಗಳಿಗೆ ಆಲೌಟ್ ಆಯಿತು.
ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುತ್ತಿದ್ದ ಯುವ ಬ್ಯಾಟರ್ ಪ್ರತೀಕಾ ರಾವಲ್ ಹಾಗೂ ಮಂಧಾನ ಜೋಡಿ ಮೊದಲ ವಿಕೆಟ್ಗೆ 110 ರನ್ಗಳ ಅತ್ಯುತ್ತಮ ಜೊತೆಯಾಟ ನೀಡಿತು. ಆಸ್ಟ್ರೇಲಿಯ ಪ್ರವಾಸದ ಕೊನೆಯ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಮಂಧಾನ, ಇದೀಗ ವೆಸ್ಟ್ ಇಂಡೀಸ್ ವಿರುದ್ಧವೂ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿ ಅರ್ಧಶತಕದ ಇನ್ನಿಂಗ್ಸ್ ಆಡಿದರು.