ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಮ್ಯಾಕ್ಸ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ಬಿಡುಗಡೆ ಆಗುತ್ತಿದ್ದು ಅಭಿಮಾನಿಗಳ ನಿರೀಕ್ಷೆಯನ್ನು ಡಬಲ್ ಮಾಡಲು ಮ್ಯಾಕ್ಸ್ ಟ್ರೇಲರ್ ರಿಲೀಸ್ ಮಾಡಲಾಗಿದೆ. ಚಿತ್ರದುರ್ಗದಲ್ಲಿ ನಡೆದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಟ್ರೇಲರ್ ಅನಾವರಣ ಮಾಡಲಾಗಿದೆ.
ಸದ್ಯ ರಿಲೀಸ್ ಆಗಿರುವ ಟ್ರೇಲರ್ನಲ್ಲಿ ಸುದೀಪ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮ್ಯಾಕ್ಸ್ ಒಂದೇ ರಾತ್ರಿಯಲ್ಲಿ ನಡೆಯುವ ಆ್ಯಕ್ಷನ್ ಕಹಾನಿ. ಈ ಚಿತ್ರದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಪಕ್ಕಾ ಆ್ಯಕ್ಷನ್ ಬಯಸುವ ಪ್ರೇಕ್ಷಕರಿಗೆ ‘ಮ್ಯಾಕ್ಸ್’ ಸಿನಿಮಾದಲ್ಲಿ ಮನರಂಜನೆಯ ಫುಲ್ ಮೀಲ್ಸ್ ಇರಲಿದೆ ಎಂಬುದು ಟ್ರೇಲರ್ನಲ್ಲೇ ಕಾಣಿಸುತ್ತಿದೆ. ಇನ್ನು, ಖಡಕ್ ಆದಂತಹ ಡೈಲಾಗ್ಗಳ ಮೂಲಕವೂ ಸುದೀಪ್ ಅವರು ವಿಲನ್ಗಳಿಗೆ ನಡುಕು ಹುಟ್ಟಿಸಿದ್ದಾರೆ.
ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿರುವ ‘ಮ್ಯಾಕ್ಸ್’ ಸಿನಿಮಾದಲ್ಲಿ ಉಗ್ರಂ ಮಂಜು, ಶರತ್ ಲೋಹಿತಾಶ್ವ, ಸುನಿಲ್, ಪ್ರಮೋದ್ ಶೆಟ್ಟಿ, ವರಲಕ್ಷ್ಮಿ ಶರತ್ ಕುಮಾರ್, ಸುಧಾ ಬೆಳವಾಡಿ, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ ಮುಂತಾದವರು ನಟಿಸಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಈ ಚಿತ್ರದ ಬಹುತೇಕ ಶೂಟಿಂಗ್ ಮಹಾಬಲಿಪುರಂನಲ್ಲಿ ನಡೆದಿದೆ. ಕಾಲಿವುಡ್ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಸಿನಿಮಾಗೆ ಬಂಡವಾಳ ಹೂಡಿದ್ದಾರೆ.