ಹುಬ್ಬಳ್ಳಿ:- ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು ಒಂಭತ್ತು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಘಟನೆ ಜರುಗಿದೆ.
ಇದೆಂಥಾ ಹುಚ್ಚಾಟ ಗುರು: ತನ್ನನ್ನು ತಾನೇ ಕಿಡ್ನಾಪ್ ಮಾಡಿಸಿಕೊಂಡ ಯುವಕ: ಬಳಿಕ ಮನೆಯವರಿಗೆ ಹೇಳಿದ್ದೇನು?
ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಜರುಗಿದೆ. ಅಯ್ಯಪ್ಪ ಸ್ವಾಮಿಗಳು ಮಲಗಿದ್ದ ವೇಳೆ ಸಿಲಿಂಡರ್ ಬಾಸ್ಟ್ಗೊಂಡಿದೆ. ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ.
ಗಾಯಗೊಂಡ ಮಾಲಾಧಾರಿಗಳಿಗೆ ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ