ಬೆಂಗಳೂರು: ಮಹಿಳಾ ಆಯೋಗ ದೊಡ್ಡದೋ.? ಸಭಾಪತಿ ದೊಡ್ಡದೋ.? ಎಂದು ಬಸವರಾಜ್ ಹೊರಟ್ಟಿ ಗರಂ ಆಗಿದ್ದಾರೆ. ನಗರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪರಿಷತ್ನಲ್ಲಿ ನಿಂದನೆ ಆರೋಪ ಪ್ರಕರಣದಲ್ಲಿ ಮಹಿಳಾ ಆಯೋಗ ಎಂಟ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಹಿಳಾ ಆಯೋಗಕ್ಕೆ ಸಭಾಪತಿಗೆ ಕೇಳುವ ಅಧಿಕಾರ ಇಲ್ಲ, ಅವರು ಪತ್ರ ಬರೆಯಲಿ, ಆದ್ರೆ ಅದಕ್ಕೆ ನಾನು ಉತ್ತರ ಕೊಡಬೇಕಾಗಿಯೂ ಇಲ್ಲ.
ಸಾಲು-ಸಾಲು ಕಷ್ಟಗಳಿಂದ ಬೇಸತ್ತಿದ್ದೀರಾ.? ಸೋಮವಾರ ಈ ಕೆಲಸ ಮಾಡಿದ್ರೆ ಶಿವನ ಕೃಪೆ ನಿಮಗಿರುತ್ತದೆ!
ಬೇಕಿದ್ರೆ, ಬೇರೆಯವರಿಗೆ ನೋಟೀಸ್ ಕೊಡಲಿ ಎಂದು ತಿಳಿಸಿದ್ದಾರೆ. ಇನ್ನೂ ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿ ವರೆಗೆ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.