ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಮೂವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಿದ್ದಾರೆ. ಎನ್ಕೌಂಟರ್ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿದೆ. ಹತರು ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
ಎನ್ಕೌಂಟರ್ ನಂತರ ಪೊಲೀಸರು ಎರಡು ಎಕೆ -47 ರೈಫಲ್ಗಳು, ಎರಡು ಗ್ಲಾಕ್ ಪಿಸ್ತೂಲ್ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಪೊಲೀಸರು ಕಾರ್ಯಚರಣೆಗೆ ತೆರಳಿದಾಗ ಮೂವರು ಶಂಕಿತರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಬಳಿಕ ಪೊಲೀಸರ ಪ್ರತಿ ದಾಳಿಯಲ್ಲಿ ಅವರು ಕೊಲ್ಲಲ್ಪಟ್ಟರು. ಪಂಜಾಬ್ ಪೊಲೀಸ್ ಮತ್ತು ಉತ್ತರ ಪ್ರದೇಶ ಪೊಲೀಸರ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಪಂಜಾಬ್ ಪೊಲೀಸ್ ತಂಡವು ಅವರ ವಿದೇಶಿ ಸಂಪರ್ಕಗಳ ಬಗ್ಗೆಯೂ ತಿಳಿಸಿದೆ. ತನಿಖೆ ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಪಿಲಿಬಿಹಿತ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.