ಮಂಡ್ಯ: ಮಗನ ಸಾವಿನ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ. ನೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಹಾಗು ಮಹದೇವಮ್ಮ ಮೃತ ತಾಯಿ ಮಗನಾಗಿದ್ದು,
ನೆನ್ನೆ ಬೆಳಿಗ್ಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಗ ಕೃಷ್ಣಮೂರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇತ್ತ ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಹೃದಯಾಘಾತದಿಂದ ತಾಯಿ ಮಹದೇವಮ್ಮ ಸಾವನಪ್ಪಿದ್ದಾರೆ.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಇದರೊಂದಿಗೆ ತಾಯಿ-ಮಗ ಇಬ್ಬರೂ ಸಾವಿನಲ್ಲೂ ಒಂದಾಗಿದ್ದಾರೆ. ತಾಯಿ-ಮಗನ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಇಬ್ಬರ ಅಂತ್ಯಕ್ರಿಯೆಯನ್ನು ಒಂದೇ ಸ್ಥಳದಲ್ಲಿ ನೆರವೇರಿಸಿದ್ದಾರೆ. ಇನ್ನು ಅಂತ್ಯಕ್ರಿಯೆಯಲ್ಲಿ ಭಾಗಿವಹಿಸಿದ ಕುಟುಂಬ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ತಾಯಿ-ಮಗನ ಸಾವಿಗೆ ಕಂಬನಿ ಮಿಡಿದಿದ್ದಾರೆ.