ಮಂಡ್ಯ :- ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ರನ್ನು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಶ್ವ ಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್ ( ರಿ ) ಗೌರವಾಧ್ಯಕ್ಷ ಕೆ.ಟಿ. ಶಿವಕುಮಾರ್, ಪ್ರಗತಿಪರ ಸಂಘಟನೆಗಳ ಸಂಚಾಲಕ ಶ್ರೀಕ ಶ್ರೀನಿವಾಸ್ ಮತ್ತು ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶಶಿ ಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ವಿಶ್ವ ಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್( ರಿ) ಗೌರವಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಸಂವಿಧಾನವನ್ನು ರಚಿಸಿದ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವ ಬದಲು ದೇವರು ದೇವರು ದೇವರು ಎಂದು ಸ್ಮರಿಸಿದರೆ ಸ್ವರ್ಗಕ್ಕೆ ಹೋಗಬಹುದು ಎಂದು ಸಂಸತ್ ಅಧಿವೇಶನದಲ್ಲಿ ಹೇಳಿರುವ ಅಮಿತ್ ಶಾ ರವರ ಹೇಳಿಕೆಯನ್ನು ಖಂಡಿಸಿಸುತ್ತೇವೆ ಎಂದರು.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಅಂಬೇಡ್ಕರ್ ರವರು ಈ ದೇಶದ ಎಲ್ಲಾ ಶೋಷಿತ ವರ್ಗಗಳ, ಮಹಿಳೆಯರು, ಎಲ್ಲಾ ವರ್ಗದ ಜನರಿಗೆ ಸಂವಿಧಾನದ ಮೂಲಕ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಅಪಮಾನ ಮಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಈ ಕೂಡಲೇ ರಾಜೀನಾಮೆ ನೀಡುವುದರ ಮೂಲಕ ಈ ದೇಶದ ಜನರಲ್ಲಿ ಕ್ಷೇಮೆ ಯಾಚಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದರು.