ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಹೌದು ನಾಗರಭಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಅನುಷಾ ಎಂಬುವವರು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ತಾಯಿಯ ಮರಣಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಅನುಷಾ ಚಿಕ್ಕಮಗಳೂರಿನ ಕಡೂರು ತಾಲೂಕು ಗರ್ಜೆ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆಯ ರಾಜ್ ನರ್ಸಿಂಗ್ ಹೋಂ ನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮೊದಲು ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಪತ್ತೆಯಾದ ಹಿನ್ನೆಲೆ, ಡೆಲಿವರಿಯಾದ 1 ತಿಂಗಳಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಈ ಸಂಬಂಧ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಆದರೆ ಆ ವೇಳೆ, ಕರುಳಿಗೆ ಹಾನಿಯಾಗಿದ್ದು, ಈ ವಿಚಾರ ತಿಳಿಸದೆ ವೈದ್ಯರು ಮುಚ್ಚಿಟ್ಟಿರುವ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ. ಆಪರೇಷನ್ ಆದ ಕೂಡಲೇ ಕೈಕಾಲುಗಳಲ್ಲಿ ಊತ ಉಂಟಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರಲಾಗಿತ್ತು, ಆದರೆ ಇಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ.